ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು. ಬಿಸಿಲಿನಿಂದ ತತ್ತರಿಸಿದ್ದವರಿಗೆ ಹವಾಮಾನ ವರದಿ ಗುಡ್ ನ್ಯೂಸ್ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಬೇಸಿಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಕೆಲವು ಕಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿತ್ತು. ಅದನ್ನು ಬಿಟ್ಟರೆ ತಾಪಮಾನದಲ್ಲಿ ಗಣನೀಯವಾಗಿ ಏರಿಕೆಯಾಗಿತ್ತು.
ಆದರೆ ಈ ವಾರದ ಆರಂಭದಲ್ಲೇ ಜನರಿಗೆ ಗುಡ್ ನ್ಯೂಸ್ ಕಾದಿದೆ. ಈ ವಾರವಿಡೀ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕೈದು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಕಡೆ ಮೋಡ ಕವಿದ ವಾತಾವರಣವಿರಲಿದೆ. ನಾಳೆಯಿಂದ ಬಹುತೇಕ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.