ಬೆಂಗಳೂರು: ಕಳೆದ ವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಿತ್ತು. ಈ ವಾರವೂ ರಣ ಮಳೆ ಮುಂದುವರಿಯುತ್ತಾ? ಈ ವಾರದ ಹವಾಮಾನ ವರದಿ ಇಲ್ಲಿದೆ ನೋಡಿ.
ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವಾರಂತ್ಯದಲ್ಲೂ ಭಾರೀ ಮಳೆಯಾಗಿತ್ತು. ಹವಾಮಾನ ವರದಿ ಪ್ರಕಾರ ಜುಲೈ 23 ರವರೆಗೂ ರಾಜ್ಯದಲ್ಲಿ ಭಾರೀ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರದವರೆಗೂ ಭಾರೀ ಮಳೆ ಮುಂದುವರಿಯಲಿದೆ. ವಾರಂತ್ಯಕ್ಕೆ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲೂ ಶುಕ್ರವಾರದವರೆಗೆ ಮೋಡ ಕವಿದ ವಾತಾವರಣ, ಮಳೆ ಕಂಡುಬರುವುದು.
ಉಳಿದಂತೆ ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾವೇರಿ, ರಾಯಚೂರು, ಬೆಳಗಾವಿ, ಶಿವಮೊಗ್ಗ, ಗದಗ, ಬೀದರ್, ತುಮಕೂರು, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ ಮೊದಲಾದ ಜಿಲ್ಲೆಗಳಲ್ಲಿ ವಾರವಿಡೀ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ.