ಬೆಂಗಳೂರು: ರಾಜ್ಯಾದ್ಯಂತ ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೆಷ್ಟು ದಿನ ಭಾರೀ ಮಳೆಯ ಮುನ್ಸೂಚನೆಯಿದೆ? ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೊನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದೂ ಕೂಡಾ ಈ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯಿದೆ. ಹವಾಮಾನ ವರದಿ ಪ್ರಕಾರ ಜುಲೈ 8 ರವರೆಗೂ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ಒಳನಾಡಿನಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಈ ಬಾರಿ ಮಳೆ ಕಡಿಮೆ. ಆದರೆ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿತ್ತು. ಆದರೆ ಇಂದು ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.