ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ವೀಕೆಂಡ್ ನಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರವಿರುತ್ತಾ? ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ಈ ವಾರವಿಡೀ ರಾಜ್ಯಾದ್ಯಂತ ಮಳೆಯಾಗಿತ್ತು. ಕರಾವಳಿ ಭಾಗದಲ್ಲಿ ಈ ವಾರ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಮಳೆಯಾಗುತ್ತಿತ್ತು. ಕರಾವಳಿ ಅಲ್ಲದೆ ಮಲೆನಾಡಿನಲ್ಲೂ ಉತ್ತಮ ಮಳೆಯಾಗಿದೆ.
ಆದರೆ ವಾರಂತ್ಯದ ಎರಡು ದಿನವಾದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಇಂದು ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನಾಳೆ ಬಹುತೇಕ ಮೋಡ ಕವಿದ ವಾತಾವರಣವಿರಲಿದೆ. ಮಂಡ್ಯ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಯಾದಗಿರಿ, ಬಳ್ಳಾರಿ, ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ ಚಿಕ್ಕಮಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.