ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿತ್ತು. ಆದರೆ ಇಂದು ಮಾತ್ರ ಮೂರು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ಕಡೆ ಮಳೆಯಲ್ಲ ಬೆಂಕಿಯ ಮಳೆಯಾಗಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.
ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಲೇ ಇತ್ತು. ಆದರೆ ಇಂದು ಉಡುಪಿ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿಲ್ಲ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿತ್ತು.
ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಸಣ್ಣ ಮಟ್ಟಿಗೆ ಮಳೆಯಾಗಲಿದೆ. ಉಳಿದೆಡೆ ತಾಪಮಾನ ವಿಪರೀತವಾಗಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಲಘುವಾಗಿ ಮೋಡ ಕವಿದ ವಾತಾವರಣವಿರಲಿದೆ.
ಆದರೆ ಉತ್ತರದ ಜಿಲ್ಲೆಗಳಾದ ರಾಯಚೂರು, ಬೀದರ್, ಕಲಬುರಗಿ, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಬೆಂಕಿಯ ಮಳೆಯಾಗಲಿದೆ. ಅಂದರೆ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಲಿದ್ದು, 40 ಡಿಗ್ರಿ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.