Karnataka Weather: ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ರಾಜಧಾನಿಯಲ್ಲಿ ಅಲರ್ಟ್‌ ಘೋಷಣೆ

Sampriya

ಭಾನುವಾರ, 7 ಸೆಪ್ಟಂಬರ್ 2025 (09:59 IST)
Photo Credit X
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಹಲವು ದಿನ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.  

ರಾಜ್ಯದಲ್ಲಿ ಸೆ.11 ರವರೆಗೂ ಮಳೆ ಮುಂದುವರೆಯಲಿದೆ. ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು ಜಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಾದ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಕರಾವ‌ಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೆ ಆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೂ ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ. ನಿನ್ನೆ ಸಹ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿದ್ದಾನೆ. ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ