ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಅಪ್ಪಳಿಸಲಿರುವ ಶಕ್ತಿ ಸೈಕ್ಲೋನ್ ಪರಿಣಾಮ ರಾಜ್ಯದಲ್ಲೂ ಈ ವಾರವಿಡೀ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ಮುಂಬೈ ಮತ್ತು ಗುಜರಾತ್ ಕರಾವಳಿ ತೀರಗಳಿಗೆ ಇಂದು ಶಕ್ತಿ ಸೈಕ್ಲೋನ್ ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯದ ಮೇಲೂ ಆಗಲಿದೆ. ಕರ್ನಾಟಕ, ಆಂಧ್ರ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ಅಕ್ಟೋಬರ್ 5 ರಿಂದ ಅಕ್ಟೋಬರ್ 10 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ದೊರೆತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ನಾನಾ ಜಿಲ್ಲೆಗಳಿಗೆ ಮಳೆಯಾಗಲಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಮಳೆಯ ಸೂಚನೆಯಿಲ್ಲ
ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೀದರ್, ಗದಗ, ಬೆಳಗಾವಿ, ಕಲಬುರಗಿ, ಹಾವೇರಿ, ಧಾರವಾಡ, ಹುಬ್ಬಳ್ಳಿ, ವಿಜಯಪುರ, ದಾವಣಗೆರೆ, ಬಾಗಲಕೋಟೆ ಮೊದಲಾದ ಜಿಲ್ಲೆಗಳಲ್ಲಿ ವಾರದ ಮಧ್ಯದಿಂದ ವಾರಂತ್ಯದವರೆಗೆ ಮಳೆಯ ಸೂಚನೆಯಿದೆ.