Karnataka Weather: ಈ ತಿಂಗಳ ಕೊನೆಯಲ್ಲಿ ಬಿಸಿಲಿನ ತಾಪ ಇಳಿಮುಖ ಸಾಧ್ಯತೆ

Sampriya

ಗುರುವಾರ, 20 ಫೆಬ್ರವರಿ 2025 (19:12 IST)
Photo Courtesy X
ಬೆಂಗಳೂರು: ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು  ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಅವರು ಇಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚೆ ನಡೆಸಲಾಯಿತು.

ಅಧಿಕಾರಿಗಳು ಈ ವೇಳೆ ಸಚಿವರಿಗೆ  ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂಬ ಮಾಹಿತಿ ನೀಡಿದರು.

ಪ್ರಸ್ತುವ ವರ್ಷ ಫೆಬ್ರವರಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ