ಬೆಂಗಳೂರು: ರಾಜ್ಯದಲ್ಲಿ ಇಂದು ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಇನ್ನು ಕೆಲವು ಭಾಗಗಳಿಗೆ ಉರಿಬಿಸಿಲಿನ ವಾತಾವರಣವಿರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.
ರಾಜ್ಯದಲ್ಲಿ ಈ ವಾರದ ಆರಂಭದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ಬಳಿಕ ಉರಿಬಿಸಿಲಿನ ವಾತಾವರಣವಿತ್ತು.
ಇದೀಗ ವಾರಂತ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಕೊಂಚ ಮೋಡ ಕವಿದ ವಾತಾವರಣವಿತ್ತು. ಈ ಜಿಲ್ಲೆಗಳಿಗೆ ಎರಡು ದಿನಗಳಿಗೆ ಮಳೆಯ ಸೂಚನೆಯಿದೆ. ಹಾಗಿದ್ದರೂ ಗರಿಷ್ಠ ತಾಪಮಾನ 35 ಡಿಗ್ರಿಯಷ್ಟಿರಲಿದೆ.
ಉಳಿದಂತೆ ರಾಜ್ಯದ ಉತ್ತರದ ಭಾಗಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಶುಭ್ರ ಆಕಾಶವಿರಲಿದೆ. ಕಲಬುರಗಿಯಲ್ಲಿ ಮಾರ್ಚ್ ನಲ್ಲೇ ತಾಪಮಾನ 40 ಡಿಗ್ರಿ ದಾಟಿದೆ. ವಿಜಯಪುರ, ಗದಗ ಭಾಗದಲ್ಲೂ ತಾಪಮಾನ ವಿಪರೀತ ಏರಿಕೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಲ್ಲಿ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.