Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ
ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ವರದಿಗಳು ಹೇಳಿವೆ. ಬೇಸಿಗೆಯಲ್ಲಿ ತಾಪಮಾನ ಹೆಚ್ಚಿದ್ದರೂ ಏ್ರಪಿಲ್-ಮೇ ತಿಂಗಳ ಅವಧಿಯಲ್ಲಿ ಮುಂಗಾರು ಪೂರ್ವ ಮಳೆ ಬಹುತೇಕ ಭಾಗಗಳಲ್ಲಿ ಉತ್ತಮವಾಗಿರಲಿದೆ ಎಂದು ವರದಿಯಾಗಿತ್ತು.
ಈ ವರ್ಷ ಮೇ ಕೊನೆಯ ವಾರದಲ್ಲಿ ಮಳೆಗಾಲ ಆರಂಭವಾಗುವ ನಿರೀಕ್ಷೆಯಿದೆ. ನಂತರ ಮೂರು ತಿಂಗಳು ಭಾರೀ ಮಳೆಯ ನಿರೀಕ್ಷೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಬಹುತೇಕ ಭಾಗಗಳಲ್ಲಿ ಅಂದಾಜಿಗಿಂತ ಹೆಚ್ಚು ಮಳೆಯಾಗಲಿದ್ದು ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದು ಎಂದು ತಿಳಿದುಬಂದಿದೆ.
ಈಶಾನ್ಯ ಭಾರತದ ಕೆಲವು ಪ್ರದೇಶಗಳು, ತಮಿಳುನಾಡು, ಲಡಾಖ್ ಸೇರಿದಂತೆ ಕೆಲವು ಪ್ರದೇಶ ಹೊರತುಪಡಿಸಿ ಉಳಿದೆಲ್ಲೆಡೆ ಉತ್ತಮ ಮಳೆಯಾಗಲಿದೆ. ಜೂನ್ 1 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.