Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Sampriya

ಗುರುವಾರ, 2 ಅಕ್ಟೋಬರ್ 2025 (10:59 IST)
Photo Credit X
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಅಕ್ಟೋಬರ್ 5ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲೂ ಇಂದು ಜೋರಾದ ಮಳೆ ಬರುವ ಸಾಧ್ಯತೆ ಇದೆ. ಇಲ್ಲವೇ ಮೋಡ ಕವಿದ ವಾತಾವರಣ ಇರಲಿದೆ. ಈಗ ಚಳಿ ಸಹ ಹೆಚ್ಚಾಗಿದೆ.

ಬೆಳಗಾವಿ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹೀಗಾಗಿ, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಇನ್ನೂ ಕೆಲವು ದಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ದೇಶದ ವಿವಿಧ ಭಾಗದಲ್ಲಿ ನೈರುತ್ಯ ಮಾನ್ಸೂನ್ ಅಂತ್ಯವಾಗುತ್ತಿದೆ. ಆದರೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ.

ಕಲ್ಯಾಣ ಕರ್ನಾಟಕದಲ್ಲಿ ಮಳೆ ಅಬ್ಬರ ಇಳಿಕೆಯಾಗಿದ್ದರೂ, ಪ್ರವಾಹ ಭೀತಿ ಕಡಿಮೆಯಾಗಿಲ್ಲ. ರಾಜ್ಯದ ಪ್ರುಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ. ಜಲಾಶಯಗಳಿಂದ ನೀರು ಹೊರ ಬಿಡಲಾಗುತ್ತಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ