ಬೆಂಗಳೂರು: ರಾಜ್ಯದಲ್ಲಿ ಈ ವಾರವಂತೂ ತಾಪಮಾನದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಲಿದೆ.
ಹವಾಮಾನ ತಜ್ಞರ ಪ್ರಕಾರ ಈ ತಿಂಗಳಲ್ಲೇ ದೇಶದ ನಾನಾ ಭಾಗಗಳಲ್ಲಿ ದಾಖಲೆಯ ಮಟ್ಟಕ್ಕೆ ತಾಪಮಾನ ಏರಿಕೆಯಾಗಲಿದೆ. ಅದರ ಮುನ್ಸೂಚನೆ ಎಂಬಂತೆ ಈ ವಾರವೇ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಲೇ ಇದೆ. ನಿನ್ನೆಯಂತೇ ಇಂದೂ ವಿಪರೀತ ಬಿಸಿಲು ಕಂಡುಬರಲಿದೆ.
ಇಂದು ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವೇ 28-29 ಡಿಗ್ರಿಯಷ್ಟು ಕಂಡುಬರಲಿದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಉರಿಬಿಸಿಲಿನ ವಾತಾವರಣವಿರಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ ಇಂದು 36 ಡಿಗ್ರಿಯಷ್ಟು ಕಂಡುಬರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿಯವರೆಗೆ ದಾಖಲಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.