ಕರ್ನಾಟಕ ಹವಾಮಾನ: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Krishnaveni K

ಶನಿವಾರ, 25 ಜನವರಿ 2025 (16:41 IST)
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಚಂಡಮಾರುತದ ಪರಿಣಾಮ ಬೆಂಗಳೂರಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ.

ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಬೆಳಗಿನ ಹೊತ್ತು ವಿಪರೀತ ಮಂಜು ಮುಸುಕಿದ ವಾತಾವರಣವಿರುತ್ತದೆ. ವಾತಾವರಣದಲ್ಲಿ ಈ ಬದಲಾವಣೆ ಗಮನಾರ್ಹವಾಗಿದೆ. ಮುಂದಿನ ವಾರ ಸಣ್ಣ ಮಳೆಯಾದರೂ ಅಚ್ಚರಿಯಿಲ್ಲ. ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಂಡಮಾರುತದ ಪರಿಚಲನೆಯಿಂದಾಗಿ ದೇಶದ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ. ಜನವರಿ 25 ರಿಂದ 27 ರವರೆಗೆ ಬೆಳಗಿನ ಹೊತ್ತು ವಿಪರೀತ ಮಂಜು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.

ಈಶಾನ್ಯ ಅಸ್ಸಾಂನಲ್ಲಿ ಚಂಡಮಾರುತದ ಪರಿಚಲನೆ ಸೂಚನೆಯಿದ್ದು, ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಅಸ್ಸಾಂನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ