ಕರ್ನಾಟಕ ಹವಾಮಾನ: ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಿರಲಿದೆ ಡೀಟೈಲ್ಸ್ ಇಲ್ಲಿದೆ

Krishnaveni K

ಸೋಮವಾರ, 20 ಮೇ 2024 (10:50 IST)
ಬೆಂಗಳೂರು: ನಿನ್ನೆ ವೀಕೆಂಡ್ ನಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗಿದೆ. ಇಂದೂ ಕೂಡಾ ಮಳೆಯಾಗಲಿದೆ. ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ರಾಮನಗರ, ದಾವಣೆಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಬೇಗನೇ ಮುಂಗಾರು ಮಳೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 31 ರಿಂದ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆ ಮೋಡ ಕವಿದು ಭಾರೀ ಮಳೆಯಾಗುತ್ತಿದೆ. ಇಂದೂ ಮೋಡ ಕವಿದ ವಾತಾವರಣ ಮುಂದುವರಿದೆ. ಇದೀಗ ತಾಪಮಾನ 27 ಡಿಗ್ರಿಯಷ್ಟಿದ್ದು, ರಾತ್ರಿ ಕೊಂಚ ಮಳೆಯಾಗುವ ಸಾಧ‍್ಯತೆಯಿದೆ. ಈಗಾಗಲೇ ಸುರಿದ ಮಳೆಗೇ ಬೆಂಗಳೂರಿನಲ್ಲಿ ಕೊಂಚ ಮಟ್ಟಿಗೆ ನೀರಿನ ಸಮಸ್ಯೆ ನಿವಾರಣೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ