Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

Krishnaveni K

ಶನಿವಾರ, 11 ಏಪ್ರಿಲ್ 2026 (08:41 IST)
ಬೆಂಗಳೂರು:  ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಇಂದು ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ.

ನಿನ್ನೆ ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲೇ ಅತ್ಯಧಿಕ ತಾಪಮಾನ ದಾಖಲಾಗಿತ್ತು. ಆದರೆ ನಿನ್ನೆಗೆ ಹೋಲಿಸಿದರೆ ಇಂದು ತಾಪಮಾನ ಕೊಂಚ ಇಳಿಕೆಯಾಗಲಿದೆ. ಆದರೆ ಇಂದು ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಅಥವಾ ಮೋಡ ಕವಿದ ವಾತಾವರಣ ನಿರೀಕ್ಷಿಸಬಹುದಾಗಿದೆ.

ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಇಂದು ಸಣ್ಣ ಮಳೆ ಅಥವಾ ಮೋಡ ಕವಿದ ವಾತಾವರಣ ನಿರೀಕ್ಷಿಸಬಹುದಾಗಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾದರೂ ಅಚ್ಚರಿಯಿಲ್ಲ.

ಉಳಿದ ಜಿಲ್ಲೆಗಳಲ್ಲಿ ಇಂದು ಉರಿ ಬಿಸಿಲಿನ ವಾತಾವರಣವಿರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ. ಬಳ್ಳಾರಿ, ರಾಯಚೂರು,  ವಿಜಯಪುರದಲ್ಲಿ ಇಂದು ಗರಿಷ್ಠ ತಾಪಮಾನ 38-39 ಡಿಗ್ರಿಯಷ್ಟು ಕಂಡುಬರಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ಕಂಡುಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ