ಕರ್ನಾಟಕ ಲೇಟೆಸ್ಟ್ ಹವಾಮಾನ ವರದಿ: ಜುಲೈ 13 ರ ಬಳಿಕ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Krishnaveni K

ಗುರುವಾರ, 11 ಜುಲೈ 2024 (09:44 IST)
ಬೆಂಗಳೂರು: ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಜುಲೈ 13 ರ ನಂತರ ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆಯೂ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿನ್ನೆ ಅಪರಾಹ್ನ ಮಳೆಯಾಗಿದೆ. ಇಂದೂ ಕೂಡಾ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡಿನಲ್ಲೂ ಮಳೆ ಮುಂದುವರಿಯಲಿದೆ.

ಜುಲೈ 13 ರ ನಂತರ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಹಾಸನ, ಚಿಕ್ಕಮಗಳೂರು, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.

ಇದಲ್ಲದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿಯಷ್ಟಿದೆ. ಕನಿಷ್ಠ ಉಷ್ಣಾಂಶ 18 ಡಿಗ್ರಿಯಷ್ಟು ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ