ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮತ್ತೆ ಮಳೆ, ಯೆಲ್ಲೊ ಅಲರ್ಟ್

Krishnaveni K

ಬುಧವಾರ, 11 ಡಿಸೆಂಬರ್ 2024 (10:02 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ಸೈಕ್ಲೋನ್ ಮಳೆ ಇಡೀ ಕರ್ನಾಟಕದಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಸಿತ್ತು. ಇದೀಗ ಮತ್ತೆ ಕರ್ನಾಟಕದಲ್ಲಿ ಮಳೆಯಾಗಲಿರುವುದಾಗಿ ಹವಾಮಾನ ವರದಿ ಹೇಳಿದೆ.

ರಾಜ್ಯ ರಾಜಧಾನಿ  ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಕೆಲವು ಜಿಲ್ಲೆಗಳಿಗೆ ಈ ಹಿನ್ನಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ನೋಡಿ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಸ್ವಲ್ಪ ಮೋಡ, ಸ್ವಲ್ಪ ಬಿಸಿಲು ಎನ್ನುವಂತಹ ವಾತಾವರಣವಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಕನಿಷ್ಠ ಉಷ್ಣಾಂಶ 19 ಡಿಗ್ರಿಯಷ್ಟಿದೆ. ಡಿಸೆಂಬರ್ 13 ರ ನಂತರ ಕೆಲವೆಡೆ ಮಳೆಯಾಗಲಿದೆ ಎಂದು ಕಳೆದ ವಾರವೇ ಮುನ್ಸೂಚನೆ ಸಿಕ್ಕಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ