ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ತುಂತುರು ಮಳೆ

Krishnaveni K

ಗುರುವಾರ, 12 ಡಿಸೆಂಬರ್ 2024 (09:27 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ.

ಕಳೆದ ವಾರವಷ್ಟೇ ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಇದೀಗ ಮತ್ತೊಮ್ಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ಅದರಂತೆ ಇಂದು ಬೆಳಿಗ್ಗೆಯಿಂದಲೇ ಮಳೆಯ ವಾತಾವರಣವಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಮುನ್ಸೂಚನೆಯಿದೆ ಎಂದು ಹವಾಮಾನ ವರದಿ ಹೇಳಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಎದ್ದಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿಯಷ್ಟಿದೆ ಎಂದು ವರದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ