ಕರ್ನಾಟಕ ಹವಾಮಾನ: ಈ ದಿನದ ಬಳಿಕ ರಾಜ್ಯದಲ್ಲಿ ಈ ಭಾಗಗಳಲ್ಲಿ ಮಳೆ

Krishnaveni K

ಶುಕ್ರವಾರ, 10 ಜನವರಿ 2025 (10:57 IST)
ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಚಳಿಯ ಬಳಿಕ ಮತ್ತೆ ಅಕಾಲಿಕ ಮಳೆಯಾಗುವ ಸೂಚನೆಯಿದೆ. ಈ ದಿನದಿಂದ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ನಿನ್ನೆಯಿಂದ ವಿಪರೀತ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿದೆ. ನಾಲ್ಕು ದಿನ ವಿಪರೀತ ಚಳಿಯಿರಲಿದ್ದು, ಅದಾದ ಬಳಿಕ ಮಳೆಯ ಮುನ್ಸೂಚನೆ ಸಿಕ್ಕಿದೆ. ಅಂದರೆ ಜನವರಿ 14 ರಿಂದ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ದೊರೆತಿದೆ.

ಆದರೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಯಥಾ ಪ್ರಕಾರ ಚಳಿಯ ವಾತಾವರಣ ಮುಂದುವರಿಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ