ಕರ್ನಾಟಕದಲ್ಲಿ ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಅಬ್ಬರ

Krishnaveni K

ಶನಿವಾರ, 27 ಜುಲೈ 2024 (10:58 IST)
ಬೆಂಗಳೂರು: ಕರಾವಳಿ ಜಿಲ್ಲೆಗಳ ಬಳಿಕ ಈಗ ಉತ್ತರ ಕರ್ನಾಟಕದಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರದದಲ್ಲಿ ಸುರಿಯುತ್ತಿರುವ ಭಾರೀ ಮಳೆ ಕರ್ನಾಟಕದ ಉತ್ತರ ಭಾಗಕ್ಕೂ ತಟ್ಟಿದೆ.

ಇಷ್ಟು ದಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ರಾಜ್ಯದ ಬಹುತೇಕ ಡ್ಯಾಮ್ ಗಳು ಭರ್ತಿಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿ ತಟದ ಜನರಿಗೆ ಆತಂಕ ಶುರುವಾಗಿದೆ.

ಇಂದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ ಮೊದಲಾದೆಡೆ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ, ಬೆಳಗಾವಿಯಲ್ಲೂ ಭಾರೀ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲಾ, ಭಟ್ಕಳ, ದಾಂಡೇಲಿ, ಯಲ್ಲಾಪುರ, ಶಿರಸಿ, ಶಿವಮೊಗ್ಗ ಮುಂತಾದೆಡೆ ನಿನ್ನೆ ಭಾರೀ ಮಳೆ ಸುರಿದಿದ್ದು ಇಂದೂ ಮಳೆ ಮುಂದುವರಿದಿದೆ. ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ. ಮಳೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ