ಎಚ್ಚರವಾಗಿರಿ, ಈ ದಿನದವರೆಗೂ ಕರ್ನಾಟಕದಲ್ಲಿ ಮಳೆ ಅಬ್ಬರ

Krishnaveni K

ಶನಿವಾರ, 12 ಅಕ್ಟೋಬರ್ 2024 (09:07 IST)
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಆರು ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಕ್ಟೋಬರ್ 16 ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವರಾತ್ರಿ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ, ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಅಕ್ಟೋಬರ್ 15 ಮತ್ತು 16 ರಂದು ಮಳೆ ಮತ್ತಷ್ಟು ತೀವ್ರವಾಗುವ ಸೂಚನೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಮತ್ತು ಶಿವಮೊಗ್ಗ, ಚಿಕ್ಕಮಗಳೂರು, ಗದಗ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. ಅಲ್ಲದೆ, ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 12 ರವರೆಗೆ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಭಾಗಗಳಲ್ಲಿ ಸದ್ಯಕ್ಕೆ ಪ್ರವಾಸಿಗರು ಸಮುದ್ರ ದಂಡೆಗಳಿಗೆ ತೆರಳದೇ ಇರುವುದು ಉತ್ತಮ. ಚಾರ್ಮಾಡಿ ಘಾಟಿಯಲ್ಲಿ ಮೊನ್ನೆ ಮಳೆಯಿಂದಾಗಿ ಗುಡ್ಡ ಕುಸಿತವಾಗಿತ್ತು. ಮಳೆ ತೀವ್ರವಾದರೆ ಶಿರಾಡಿ ಘಾಟಿಯಲ್ಲೂ ಮತ್ತೆ ಗುಡ್ಡ ಕುಸಿತದ ಭೀತಿ ಎದುರಾಗಲಿದೆ. ಹೀಗಾಗಿ ಎಚ್ಚರವಾಗಿರಬೇಕಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ