ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

Krishnaveni K

ಮಂಗಳವಾರ, 9 ಜುಲೈ 2024 (10:26 IST)
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿನ್ನೆಯೂ ಎಡೆಬಿಡದೇ ಮಳೆ ಸುರಿದಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.

ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಮಳೆಯ ಅಬ್ಬರ ಮುಂದುವರಿದಿರುವುದುರಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಶರಾವತಿ ಮತ್ತು ಗುಂಡಬಾಳ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ಸಿಲುಕಿದವರನ್ನು ರಕ್ಷಿಸಲು ಎನ್ ಡಿಆರ್ ಎಫ್ ಸಿಬ್ಬಂದಿ ಧಾವಿಸಿದ್ದಾರೆ. ಕಳೆದ ಐದು ದಿನಗಳಿಂದ ಇಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಒಂದು ವಾರ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಸದೃಶ ವಾತಾವರಣ ನಿರ್ಮಾಣವಾಗಿದೆ. ಭಾರೀ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿನ್ನೆ ಸಂಜೆ ಭಾರೀ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿದ್ದು ಅಪರಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ