ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಹವಾಮಾನ ವರದಿ ಇಲ್ಲಿದೆ

Krishnaveni K

ಗುರುವಾರ, 20 ಜೂನ್ 2024 (10:22 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಚುರುಕಾಗಲಿದ್ದು, ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ ಎಂಬ ಮಾಹಿತಿ ಇಲ್ಲಿದೆ.

ಜೂನ್ 24 ರಿಂದ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ದಿನಗಳಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದೆ.

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಮೋಡ ಕವಿದ ವಾತಾವರಣವಿದ್ದು ಕೆಲವೊಮ್ಮೆ ಮಾತ್ರ ಸಣ್ಣ ಮಟ್ಟಿನ ಮಳೆಯಾಗುತ್ತಿದೆ. ಜೂನ್ 24 ರ ನಂತರ ಬೆಂಗಳೂರಿನಲ್ಲೂ ಕೊಂಚ ಮಟ್ಟಿಗೆ ಮಳೆಯ ಲಕ್ಷಣ ಕಂಡುಬರುವ ಸಾಧ್ಯತೆಯಿದೆ.

ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಇಂದು ಗರಿಷ್ಠ ಉಷ್ಣಾಂಶ 30 ಡಿಗ್ರಿಯಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿಯಷ್ಟಿದೆ. ಇಂದು ಬೆಂಗಳೂರಿನ ಕೆಲವೆಡೆ ಸಣ್ಣ ಮಟ್ಟಿಗೆ ಮಳೆಯಾಗುವ ಸೂಚನೆಯಿದೆ. ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಬಿರುಸಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ