Karnataka Weather: ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

Krishnaveni K

ಬುಧವಾರ, 17 ಸೆಪ್ಟಂಬರ್ 2025 (08:39 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮಳೆಯ ಅಬ್ಬರ ದಕ್ಷಿಣದ ಜಿಲ್ಲೆಗಳಿಂದ ಉತ್ತರದ ಜಿಲ್ಲೆಗೆ ವರ್ಗಾವಣೆಯಾಗಿದೆ. ಇದೀಗ ದಕ್ಷಿಣದಲ್ಲಿ ಮಳೆ ಕಡಿಮೆಯಾಗಿದ್ದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದೂ ಈ ಕೆಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕಳೆದ ವಾರ ಕೊಂಚ ಮಟ್ಟಿಗೆ ತಣ್ಣಗಾಗಿದ್ದ ವರುಣನ ಅಬ್ಬರ ಈ ವಾರದ ಆರಂಭದಲ್ಲೂ ಕಡಿಮೆಯೇ ಇತ್ತು. ಆದರೆ ಇಂದಿನಿಂದ ಕೆಲವು ಜಿಲ್ಲೆಗಳಿಗೆ ಅದರಲ್ಲೂ ವಿಶಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ಉತ್ತರ ಕನ್ನಡ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಇಂದೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ. ಜೊತೆಗೆ ಉಡುಪಿ, ಚಿಕ್ಕಮಗಳೂರು, ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಬೀದರ್, ಗದಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ