Karnataka Weather: ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ ಬರುವುದು ಪಕ್ಕಾ

Sampriya

ಬುಧವಾರ, 30 ಏಪ್ರಿಲ್ 2025 (10:26 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ  ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಹಾಗೂ ಸಂಜೆ ವೇಳೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಧ್ಯಾಹ್ನದ ಬಿಸಿಲ ತಾಪಕ್ಕೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವ ಪರಿಸ್ಥಿತಿ ಸದ್ಯ ರಾಜ್ಯದಲ್ಲಿದೆ ಉಂಟಾಗಿದೆ. ಬಿಸಿಲ ತಾಪದ ಜತೆಗೆ ಹಲವೆಡೆ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯಿದೆ.

ಇನ್ನೂ ಕರಾವಳಿ ಭಾಗದಲ್ಲಿ ಮಧ್ಯಾಹ್ನ ಉರಿಬಿಸಿಲಿಗೆ ಜನತೆ ತತ್ತರಿಸಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಗೆ ಚಿಂತೆಗೊಳಗಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉರಿಬಿಸಿಲನ ಜತೆಗೆ ಈಚೆಗೆ ಸಂಜೆಗೆ ಮಳೆಯಾಗುತ್ತಿದೆ.

ಇನ್ನೂ ಉತ್ತರ ಕರ್ನಾಟಕದಲ್ಲಿ ವಿಪರೀತ ಬಿಸಿಲಿನಿಂದ ಜನತೆ ಕಂಗೆಟ್ಟಿದ್ದಾರೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ. ಬೆಂಗಳೂರು ಹವಾಮಾನ ಕೇಂದ್ರದ ವರದಿಯ ಪ್ರಕಾರ ಇಂದು 19 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿಯ ಪೈಕಿ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಪೈಕಿ ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಪೈಕಿ ಮಂಡ್ಯ, ಹಾಸನ, ಮೈಸೂರು, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮೇ 5ರ ಸೋಮವಾರದವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ