ಕೆಎಎಸ್ ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆಗೆ ಶರಣು

Sampriya

ಶನಿವಾರ, 11 ಮೇ 2024 (15:07 IST)
ಬೆಂಗಳೂರು: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಚೈತ್ರಾಗೌಡ ಎಂದು ಗುರುತಿಸಲಾಗಿದ್ದು, ಈಕೆ ವೃತ್ತಿಯಲ್ಲಿ ವಕೀಲೆಯಾಗಿದ್ದಾರೆ.

ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ಸಾವಿಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಮನೆಯಲ್ಲಿ ಯಾವುದೇ ಡೆತ್‌ನೋಟು ಕಂಡುಬಂದಿಲ್ಲ ಎಂದು ಹೇಳಲಾಗಿದೆ.

ಸ್ಥಳಕ್ಕೆ  ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ