ಕಾವೇರಿ ಜಲಾನಯನದಲ್ಲಿ ನಿಜವಾಗಿಯೂ ನೀರಿನ ಕೊರತೆಯಿದೆ: ಕೇಂದ್ರ ತಂಡ

ಶುಕ್ರವಾರ, 7 ಅಕ್ಟೋಬರ್ 2016 (16:44 IST)
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದು ಕಂಡು ಬರುತ್ತಿದೆ ಎಂದು ಕೇಂದ್ರ ತಾಂತ್ರಿಕ ತಂಡದ ಮುಖ್ಯಸ್ಥ ಜಿ.ಎಸ್. ಝಾ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದ ಹಳ್ಳಿ ಹಳ್ಳಿಗಳಿಗೂ ಭೇಟಿ ನೀಡಿದ್ದು, ಇಲ್ಲಿಯ ವಾಸ್ತವ ಸ್ಥಿತಿ ಅರಿಯಲು ಪ್ರಯತ್ನ ಮಾಡಿದ್ದೇನೆ. ಈ ಪ್ರದೇಶಗಳಲ್ಲಿ ನೀರಿನ ಅಭಾವ ಇರುವ ಕುರಿತು ಕಂಡು ಬಂದಿದೆ. ಹಾಗೂ ಕೆಆರ್‌ಎಸ್ ಜಲಾಶಯಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದರು.
 
ಕಾವೇರಿ ಜಲಾನಯನ ಪ್ರದೇಶದ ಪರಿಶೀಲನೆ ಬಳಿಕ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸುತ್ತೇನೆ. ಇಲ್ಲಿಯ ವಾಸ್ತವ ಸ್ಥಿತಿಗೆ ಪೂರಕವಾಗಿ ವರದಿ ಸಲ್ಲಿಸುತ್ತೇನೆ ಎಂದು ಝಾ ಸ್ಪಷ್ಟಪಡಿಸಿದರು. 
 
ಸುಪ್ರೀಂಕೋರ್ಟ್ ಸೂಚನೆಯಂತೆ ಉಭಯ ರಾಜ್ಯಗಳಲ್ಲಿನ ನೀರನ ಲಭ್ಯತೆ ಕುರಿತು ಪರಿಶೀಲನೆ ನಡೆಸಲು ಕೇಂದ್ರದ ತಂಡ ಕಾವೇರಿ ಜಲಾನಯನ ಪ್ರದೇಶಕ್ಕೆ ಆಗಮಿಸಿದ್ದು, ರಾಜ್ಯಗಳಲ್ಲಿರುವ ನೀರಿನ ಲಭ್ಯತೆ ಹಾಗೂ ವಸ್ತುಸ್ಥಿತಿ ಕುರಿತು ಅಧ್ಯಯನ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ