ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಮಿಳುನಾಡು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ತಿಳಿಸಿದ್ದರು. ಜೂನ್ ಮತ್ತು ಜುಲೈ ತಿಂಗಳಲ್ಲಿ ನಮಗೆ ಸಲ್ಲಬೇಕಾಗಿದ್ದ ನೀರನ್ನು ಕರ್ನಾಟಕ ರಾಜ್ಯ ನೀಡಿಲ್ಲ. ಈ ಕುರಿತು ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು.