ಕಾವೇರಿ ವಿವಾದ: ತ್ವರಿತ ಅರ್ಜಿ ವಿಚಾರಣೆಗೆ ಸುಪ್ರೀಂಗೆ ತಮಿಳುನಾಡು ಸರಕಾರ ಮನವಿ

ಶುಕ್ರವಾರ, 26 ಆಗಸ್ಟ್ 2016 (17:40 IST)
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಅರ್ಜಿ ವಿಚಾರಣೆ ಮಾಡುವಂತೆ ತಮಿಳುನಾಡು ಸರಕಾರ ಮನವಿ ಮಾಡಿಕೊಂಡಿದೆ.
 
ಕಾವೇರಿ ನದಿಯಿಂದ ನೀರು ಬಿಡುಗಡೆಗೆ ಕೋರಿ ಸಲ್ಲಿಸಲಾದ ಮಧ್ಯಂತರ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ಮಾಡುವಂತೆ ತಮಿಳುನಾಡು ಪರ ವಕೀಲರು, ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪ್ಟೆಂಬರ್ 2 ರಂದು ವಿಚಾರಣೆಗೆ ನಡೆಸಲು ಕೋರ್ಟ್ ನಿರ್ಧರಿಸಿದೆ.
 
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ನದಿಯಿಂದ 50 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಕರ್ನಾಟಕ ಸರಕಾರಕ್ಕೆ ಸೂಚಿಸುವಂತೆ ಕೋರಿ ತಮಿಳುನಾಡು ಸರಕಾರ ಸುಪೀಂ ಕೋರ್ಟ್ ಮೋರೆ ಹೋಗಿತ್ತು.
 
ಕಾವೇರಿ ನದಿಯಿಂದ 10 ದಿನಗಳಲ್ಲಿ 50 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರಕಾರ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿತ್ತು. 

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ