ರಾಜ್ಯದ ರೈತರಿಗೆ 'ಮಣ್ಣು ತಿನ್ನುವ ಭಾಗ್ಯ' ನೀಡಿದ ಸರಕಾರ: ಬಿಜೆಪಿ ಆಕ್ರೋಶ

ಮಂಗಳವಾರ, 20 ಸೆಪ್ಟಂಬರ್ 2016 (14:54 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವರಿ ಸಮಿತಿ ಆದೇಶ ಹೊರ ಬಿದ್ದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದ ರೈತರಿಗೆ ನೀರು ನೀಡುವ ಬದಲು 'ಮಣ್ಣು ತಿನ್ನುವ ಭಾಗ್ಯ' ನೀಡಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. 
 
ಮಂಡ್ಯ ಜಿಲ್ಲೆಯ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ಬಿಜೆಪಿ ಕಾರ್ಯಕರ್ತರು ಬಾಯಿಯಲ್ಲಿ ಮಣ್ಣು ಹಾಕಿಕೊಂಡು, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮೇಲುಸ್ತುವಾರಿ ಸಮಿತಿ ಸೂಚನೆ ನೀಡಿರುವುದನ್ನು ಖಂಡಿಸಿದ ಪ್ರತಿಭಟನಾನಿರತರು, ಈ ನಿರ್ಣಯ ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ