ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲವೆಂದು ಸರಕಾರದ ಮುಖ್ಯ ಕಾರ್ಯದರ್ಶಿ ವಾದ

ಸೋಮವಾರ, 19 ಸೆಪ್ಟಂಬರ್ 2016 (15:06 IST)
ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಯಾವುದೇ ಕಾರಣಕ್ಕೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಕಾವೇರಿ ಮೇಲುಸ್ತುವಾರಿ ಸಮಿತಿಯ ಮುಂದೆ ವಾದ ಮಂಡಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿಯ ಮುಂದೆ ಸರಕಾರದ ಕಾರ್ಯದರ್ಶಿ ಸಮರ್ಥವಾಗಿ ವಾದ ಮಂಡಿಸಿದ್ದರು.
 
ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ರಾಜ್ಯದ 80 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸಿದ್ಧತೆ ನಡೆಸಲಾಗಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಿದರು. 
 
ಕಾವೇರಿ ಮೇಲುಸ್ತುವಾರಿ ಸಭೆ ನವದೆಹಲಿಯಲ್ಲಿ ನಡೆಯುವ ಹಿನ್ನೆಲೆಯಲ್ಲಿ ಇಂದು ಮುಂಜಾಗೃತ ಕ್ರಮವಾಗಿ ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ