ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮೇಲೆ ದೊಡ್ಡ ಜವಾಬ್ದಾರಿಯಿದ್ದು, ರಾಜ್ಯದಲ್ಲಿ ಕೇವಲ ಕುಡಿಯಲು ಮಾತ್ರ ನೀರಿದೆ. ವಾಸ್ತವ ಅಂಶವನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡನೆ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಪರಸ್ಪರ ಮಾತುಕತೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು ಎಂದರು