ಕಾವೇರಿ ನೀರು: ತಮಿಳುನಾಡು ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ

ಸೋಮವಾರ, 1 ಜುಲೈ 2019 (17:32 IST)
ಚೆನ್ನೈ ಮಹಾನಗರದಲ್ಲಿ ನೀರಿನ ಹಾಹಾಕಾರ ಉಂಟಾಗಿರುವುದಕ್ಕೆ ಹಾಗೂ ಕಾವೇರಿ ನದಿ ನೀರು ಮತ್ತು ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು.

ರಾಜಧಾನಿ ಚೆನ್ನೈ ಮಹಾನಗರದಲ್ಲಿ ನೀರಿನ ಸಮಸ್ಯೆ ವಿಪರೀತವಾಗಿದೆ. ಈ ಕುರಿತು ಗಮನ ಸೆಳೆಯುವ ಸೂಚನೆಗೆ ನಡೆದ ಚರ್ಚೆಯಲ್ಲಿ ನಡುವೆ ಪ್ರವೇಶಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ, ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಆಣೆಕಟ್ಟು ಕಟ್ಟುತ್ತಿರುವ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಡಿಎಂಕೆ ಮಿತ್ರ ಪಕ್ಷ ಕಾಂಗ್ರೆಸ್ ನಾಯಕರು ವಿರೋಧಿಸಿಲ್ಲ ಎಂದರು.

ಚುನಾವಣೆ ವೇಳೆ ಕರ್ನಾಟಕದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಮೇಕೆದಾಟು ಯೋಜನೆ ನಿರ್ಮಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಆದರೆ ರಾಹುಲ್ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ತಕರಾರು ಮಾಡಿಲ್ಲ. ಅದನ್ನು ಮರೆತು ತಮಿಳುನಾಡು ಮುಖ್ಯಮಂತ್ರಿಯನ್ನು ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು.

ಈ ಹಿಂದಿನ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದೆ. ಚರ್ಚೆಗೆ ಸಮಯ ಕೋರಿದ್ದೆ. ಆದರೆ ಅವರು ಪ್ರತಿಕ್ರಿಯೆ ನೀಡಿರಲಿಲ್ಲ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ