ಬೆಂಗಳೂರು- ಮೈಸೂರು ಹೆದ್ದಾರಿ ಬಂದ್: ಪ್ರಯಾಣಿಕರ ಪರದಾಟ

ಬುಧವಾರ, 7 ಸೆಪ್ಟಂಬರ್ 2016 (13:10 IST)
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿ ಬಂದ್ ಮಾಡಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.
 
ಕೆಲ ಪ್ರತಿಭಟನಾಕಾರರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯ ಸರಕಾರ ಹಾರಂಗಿ ಜಲಾಶಯದಿಂದ ನಿನ್ನೆ ರಾತ್ರಿ 12 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸಿರುವುದರಿಂದ ಆಕ್ರೋಶಗೊಂಡ ರೈತರ ಪ್ರತಿಭಟನೆ ಹಿಂಸೆಯತ್ತ ತಿರುಗಿದೆ.
 
ಇಂದು ಅಂಗಡಿ ಮುಗ್ಗಟ್ಟುಗಳ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು ಅಂಗಡಿಯಲ್ಲಿರುವ ವಸ್ತುಗಳನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ