ಮತ್ತೆ ತಮಿಳುನಾಡಿಗೆ ನೀರುಹರಿಸುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶ

ಸೋಮವಾರ, 19 ಸೆಪ್ಟಂಬರ್ 2016 (18:44 IST)
ರಾಜ್ಯ ಸರಕಾರದ ವಾದವನ್ನು ಒಪ್ಪದ ಕಾವೇರಿ ಮೇಲುಸ್ತುವಾರಿ ಸಮಿತಿ ಮುಂದಿನ 10 ದಿನಗಳ ಕಾಲ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.
 
ಇಂದು ದೆಹಲಿಯಲ್ಲಿ  ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಕಾವೇರಿ ನದಿಯ ಹೊರಹರಿವು ಒಳಹರಿವು ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
 
ಕರ್ನಾಟಕ ಸೆಪ್ಟೆಂಬರ್ 20 ರಿಂದ 30 ರವರೆಗೆ 10 ದಿನಗಳ ಕಾಲ ಮೂರು ಸಾವಿ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ತೀರ್ಪು ಸಮಾಧಾನ ತರದಿದ್ದರೆ ಸುಪ್ರೀಂಕೋರ್ಟ್ ಮೊರಹೋಗುವಂತೆ ಸಲಹೆ ನೀಡಿದ್ದಾರೆ.
 
ಕಾವೇರಿ ಜಲಾನಯದಲ್ಲಿ ಕುಡಿಯುವ ನೀರಿಗೆ ಬರ ಎದುರಾಗುತ್ತಿರುವುದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ವಾದಿಸಿದರು. ಜಾಧವ್ ವಾದಕ್ಕೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ