ಖಾತೆ ಹಂಚಿಕೆಯ ಕುರಿತು ಸಭೆ ಕರೆದ ಕೆ.ಸಿ. ವೇಣುಗೋಪಾಲ್

ಬುಧವಾರ, 26 ಡಿಸೆಂಬರ್ 2018 (10:18 IST)
ಬೆಂಗಳೂರು : ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಲಿದ್ದಾರೆ.


ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಂಪುಟ ಪುನಾರಚನೆಯಾಗಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇಂದು ಸಭೆ ಕರೆದು 8 ಜನ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವುದು ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ.


ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗು ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ