ರಾಜ್ಯ ಕಾಂಗ್ರೆಸ್ ನಾಯಕರ ತುರ್ತು ಸಭೆ ಕರೆದ ಕೆಸಿ ವೇಣುಗೋಪಾಲ್
ಸಭೆಯಲ್ಲಿ ಡಿಸಿಎಂ ಪರಮೇಶ್ವರ್, ಸಚಿವ ಕೆಜೆ ಜಾರ್ಜ್, ಜಯಮಾಲ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ.
ಹೇಗಾದರೂ ಮಾಡಿ ಬಳ್ಳಾರಿ ಲೋಕಸಭೆ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಕಾಂಗ್ರೆಸ್ ಇಲ್ಲಿನ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಶಕ್ತಿಮೀರಿ ಪ್ರಯತ್ನಮಾಡಲು ನಿರ್ಧರಿಸಿದೆ. ಇದಕ್ಕಾಗಿ ಇಂದಿನ ಸಭೆಗೆ ಇಲ್ಲಿನ ಶಾಸಕರಿಗೂ ಆಹ್ವಾನ ನೀಡಲಾಗಿದೆ.