ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಕೊಕ್?

ಮಂಗಳವಾರ, 17 ಜುಲೈ 2018 (09:14 IST)
ಬೆಂಗಳೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ರನ್ನು ಹೈಕಮಾಂಡ್ ಕರ್ನಾಟಕ ಜವಾಬ್ಧಾರಿಯಿಂದ ಮುಕ್ತಗೊಳಿಸಿ ತವರಿಗೆ ಕಳುಹಿಸಲಿದೆಯೇ?

ಹೀಗೊಂದು ಸುದ್ದಿ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ರಾಜ್ಯದಲ್ಲಿ ಬಲವರ್ಧನೆಗೆ ಯೋಜನೆ ರೂಪಿಸುತ್ತಿದೆ. ಇದೇ ಕಾರಣಕ್ಕೆ ಹೈಕಮಾಂಡ್ ಈ ಮಹತ್ತರ ಬದಲಾವಣೆ ಮಾಡಲಿದೆ ಎನ್ನಲಾಗಿದೆ.

ಕೆಸಿ ವೇಣುಗೋಪಾಲ್ ರನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮರಳಿ ಅವರ ತವರು ಕೇರಳಕ್ಕೆ ಕಳುಹಿಸಲಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನೇಮಕವಾಗುವ ಸಾಧ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭ ಜೆಡಿಎಸ್ ಜತೆ ಮಾತುಕತೆ ನಡೆಸಲೂ ಆಜಾದ್ ಮಧ್ಯಸ್ಥಿಕೆ ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ