KCET Results live: ಕೆಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ವಿವರ ಇಲ್ಲಿದೆ

Krishnaveni K

ಶನಿವಾರ, 24 ಮೇ 2025 (13:39 IST)
ಬೆಂಗಳೂರು: ಈ ಸಾಲಿನ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಈಗ ಫಲಿತಾಂಶ ನೋಡುವ ಸಮಯ. ಇದೀಗ ಕರ್ನಾಟಿ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ವಿವರ ಇಲ್ಲಿದೆ.

ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಇದೀಗ 2 ಗಂಟೆ ಬಳಿಕ ವೆಬ್ ಸೈಟ್ ನಲ್ಲಿ ಪರೀಕ್ಷೆ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.

ಈ ಬಾರಿ 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿಯ ಚೈತನ್ಯ ಸಿಬಿಎಸ್ ಇ ಶಾಲೆಯ ಭವೇಶ್ ಜಯಂತಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ ಪಡೆದಿದ್ದಾರೆ. ನರ್ಸಿಂಗ್ ವಿಭಾಗದಲ್ಲಿ ನಾರಾಯಣ ಇ-ಟೆಕ್ನೋ ಶಾಲೆಯ ಹರೀಶ್ ರಾಜ್ ಪ್ರಥಮ ಸ್ಥಾನ ಪಡೆದಿದ್ದಾರೆ. ಪಶು ವೈದ್ಯಕೀಯ ವಿಭಾಗದಲ್ಲಿ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬಿ ಫಾರಂ ವಿಭಾಗದಲ್ಲಿ ಅತ್ರೆಯಾ ವೆಂಕಟಾಚಲಂ ಪ್ರಥಮ, ವೆಟರ್ನರಿ ಪ್ರಾಕ್ಟಿಕಲ್ ವಿಭಾಗದಲ್ಲಿ ರಕ್ಷಿತಾ ವಿ.ಪಿ. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಫಲಿತಾಂಶವನ್ನು kea.kar.nic.in ಅಥವಾ cetonline.karnataka.gov.in ವೆಬ್ ಸೈಟ್ ನಲ್ಲಿ ನಿಮ್ಮ ವಿವರಗಳನ್ನು ನೀಡಿ ಫಲಿತಾಂಶ ವೀಕ್ಷಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ