ಕೇರಳ: ಎಲ್‌ಡಿಎಫ್ ಸರಕಾರದಲ್ಲಿ ಸಚಿವ ಸ್ಥಾನ ಜೆಡಿ(ಎಸ್‌)ಗೆ ನೀಡಬೇಕು ಎಂದ ದೇವೇಗೌಡರು

ಶುಕ್ರವಾರ, 20 ಮೇ 2016 (15:51 IST)
ಕೇರಳ ವಿಧಾನಸಭೆ ಚುನಾವಣೆಯಲ್ಲಿ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೇತೃತ್ವದ ಜೆಡಿಎಸ್‌ ಪಕ್ಷದಿಂದ ಮೂವರು ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರು ನಮಗೂ ಒಂದು ಸಚಿವ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
 
ಎಲ್‌ಡಿಎಫ್‌ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಗಳಾದ ಮ್ಯಾಥ್ಯು ಟಿ.ಥಾಮಸ್, ಸಿ.ಕೆ.ನಾನು ಮತ್ತು ಕೃಷ್ಣನ್ ಕುಟ್ಟಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. 
 
ಕೇರಳದಲ್ಲಿ ಎಲ್‌ಡಿಎಫ್ ಅಧಿಕಾರಕ್ಕೆ ಬಂದಾಗಲೆಲ್ಲಾ ಜೆಡಿಎಸ್‌ಗೆ ಸಚಿವ ಸ್ಥಾನ ನೀಡಿದೆ. ಅದರಂತೆ, ಮೂವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕೋರುತ್ತಿದ್ದೇವೆ. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.
 
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಕಾಂಗ್ರೆಸ್ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಬೇರುಸಹಿತ ಕಿತ್ತುಹಾಕಲಾಗುವುದು ಎಂದು ಗೌಡರು ಗುಡುಗಿದ್ದಾರೆ.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ