ಕಾವೇರಿ ವಿವಾದ: ಕನ್ನಡಿಗರ ಮೇಲೆ ದರ್ಪ ತೋರಿದ ತಮಿಳಿಗರು

ಸೋಮವಾರ, 12 ಸೆಪ್ಟಂಬರ್ 2016 (11:44 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದರ್ಪ ತೋರಿದ ಘಟನೆ ವರದಿಯಾಗಿದೆ. 
 
ಕರ್ನಾಟಕ ಮೂಲದ ವುಡ್‌ಲ್ಯಾಂಡ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಕಿಡಿಗೇಡಿಗಳು ದೌರ್ಜನ್ಯ ಎಸಗಿದ್ದಾರೆ. ಕರ್ನಾಟಕದಿಂದ ತೆರಳಿದ ಭಕ್ತರ ಮೇಲೆ ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೇರೆದಿರುವ ಘಟನೆಗಳು ವರದಿಯಾಗಿದೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಎರಡು ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾರ್ಟಕದಿಂದ ತಮಿಳುನಾಡಿ ಸಂಚರಿಸುವ ಬಸ್‌ಗಳನ್ನು ಸ್ಥಗಿತಗೊಳಿಸಿಲಾಗಿದೆ. 
 
ಸೆಪ್ಟೆಂಬರ್ 5ರಂದು ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್‌ನಂತೆ 10 ದಿನ ನೀರು ಬಿಡವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಅರ್ಜಿ ಸಲ್ಲಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ