ವಿಮಾನ ನಿಲ್ದಾಣದಲ್ಲಿ ಕೆಜಿ ಚಿನ್ನ ವಶ
ಅಕ್ರಮವಾಗಿ ಸಾಗಿಸುತ್ತಿದ್ದ ಖತರ್ನಾಕ್ ಕಳ್ಳರಿಂದ ಕೆಜಿಗಟ್ಟಲೇ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 63 ಲಕ್ಷ 73 ಸಾವಿರ ಎಂದು ಅಂದಾಜಿಸಲಾಗಿದೆ.
ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ವಿಮಾನದಲ್ಲಿದ್ದ ಪ್ರಯಾಣಿಕನಿಂದ 336.7 ಗ್ರಾಮ್ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 13.43 ಲಕ್ಷ ಎಂದು ಅಂದಾಜಿಸಲಾಗಿದೆ.
ದುಬೈನಿಂದ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ಬಂದ ಓರ್ವ ಪ್ರಯಾಣಿಕನಿಂದ 21.24 ಲಕ್ಷ ರೂ. ಮೌಲ್ಯದ 523 ಗ್ರಾಮ್ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇನ್ನೊರ್ವ ಪ್ರಯಾಣಿಕನಿಂದ 29.06 ಲಕ್ಷ ರೂ. ಮೌಲ್ಯದ 716 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.