ವಿಧಾನಸಭೆಗೆ ಕೆ.ಹೆಚ್.ಮುನಿಯಪ್ಪ ಸ್ಪರ್ಧೆ

ಗುರುವಾರ, 15 ಅಕ್ಟೋಬರ್ 2020 (10:36 IST)
ರಾಜ್ಯ ರಾಜಕಾರಣದಲ್ಲಿ ಇದೀಗ ಬೈ ಎಲೆಕ್ಷನ್ ಕಾವು ಜೋರಾಗಿದೆ.

ಈ ನಡುವೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪರ್ಧೆ ಮಾಡಲಿದ್ದಾರೆ ಎನ್ನೋ ಸುದ್ದಿ ಈಗಿನಿಂದಲೇ ಕೇಳಿಬರತೊಡಗಿದೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಕೆ.ಹೆಚ್.ಮುನಿಯಪ್ಪ ಸಧ್ಯಕ್ಕಂತೂ ರಾಜ್ಯದ ರಾಜಕೀಯಕ್ಕೆ ಬರುವ ತೀರ್ಮಾನವನ್ನು ತಾವು ಮಾಡಿಲ್ಲ ಎಂದಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಆಗಮಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಾತುಕತೆ ವೇಳೆ ಹೇಳಿದ್ದಾರೆ.

ಆದರೆ ಮುಂದಿನ ವಿಧಾನಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ತಾವು ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ