ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಜೊತೆ ಎಣ್ಣೆ, ಬೇಳೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು

Krishnaveni K

ಶನಿವಾರ, 7 ಸೆಪ್ಟಂಬರ್ 2024 (15:47 IST)
Photo Credit: Facebook
ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಮುಂದಿನ ತಿಂಗಳಿನಿಂದ 5 ಕೆಜಿ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ಮತ್ತು ಸಕ್ಕರೆ ಕೊಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ನೀಡಿತ್ತು. ಈ ಬಗ್ಗೆ ಇಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು ನೋಡಿ.

ಇದೀಗ ಬಿಪಿಎಲ್ ಕಾರ್ಡ್ ದಾರರ ಪರಿಷ್ಕರಣೆ ನಡೆಯುತ್ತಿದೆ. ಆದಾಯ ಮಿತಿ ನೋಡಿಕೊಂಡು ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರನ್ನು ಬಿಪಿಎಲ್ ಕಾರ್ಡ್ ನಿಂದ ತೆಗೆದು ಹಾಕಿ ನಂತರ ಅಕ್ಕಿ ಜೊತೆ ಬೇಳೆ, ಎಣ್ಣೆ ಅಥವಾ ಸಕ್ಕರೆ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಬೇರೆ ರಾಜ್ಯಗಳಲ್ಲಿ ಬಿಪಿಎಲ್ ಕಾರ್ಡ್ ದಾರರು ಶೇ.50 ಕ್ಕಿಂತ ಹೆಚ್ಚಿಲ್ಲ. ಆದರೆ ನಮ್ಮಲ್ಲಿ ಬಿಪಿಎಲ್ ಕಾರ್ಡ್ ದಾರರ ಸಂಖ್ಯೆಯೇ ಶೇ.80 ಕ್ಕಿಂತ ಹೆಚ್ಚಿದೆ. ಹೀಗಾಗಿ ಎಲ್ಲಿ ತಪ್ಪಾಗಿದೆ, ಅರ್ಹರಲ್ಲದವರಿಗೂ ಕೊಡಲಾಗಿದೆಯೇ ಎಂದು ಪರಿಶೀಲಿಸುವ ಕೆಲಸ ಮೊದಲು ಆಗಬೇಕಿದೆ ಎಂದಿದ್ದಾರೆ.

ಅದಾದ ಬಳಿಕ ಅಕ್ಕಿ ಜೊತೆ ಏನು ಕೊಡುವುದು ಸೂಕ್ತ ಎಂದು ತೀರ್ಮಾನಿಸಿ ನಂತರ ಕೊಡುತ್ತೇವೆ ಎಂದಿದ್ದಾರೆ. ಇನ್ನು, ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರನ್ನು ಎಪಿಎಲ್ ಕಾರ್ಡ್ ಗೆ ಸೇರಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. ಮುಂದಿನ ತಿಂಗಳಿನಿಂದಲೇ ಅಕ್ಕಿ ಜೊತೆ ಬೇಳೆ, ಎಣ್ಣೆ ಕೊಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ