ದಕ್ಷಿಣ ಕನ್ನಡ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಸಂದರ್ಭದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರ ವಿರುದ್ಧ ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅನೇಕ ಹೇಳಿಕೆ ನೀಡಿದ್ದು, ಅದಲ್ಲದೆ ಹಲವರ ವಿರುದ್ಧ ಅವಹೇಳನಕಾರಿಯಾಗಿ ಆರೋಪ ಮಾಡಿದ್ದಾರು. ಅದಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಕೊಲೆ ಆರೋಪ ಮಾಡಿದ್ದರು.
ಅದೇ ರೀತಿ, ಬಿಎಲ್ ಸಂತೋಷ್ ವಿರುದ್ಧವೂ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪವಿದ್ದು, ಈ ಬಗ್ಗೆ ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ, ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ತಿಮರೋಡಿಗೆ 2 ಬಾರಿ ಪೊಲೀಸರು ನೋಟಿಸ್ ಕೊಟ್ಟಿದ್ದರು. ಕೊನೆಯದಾದಗಿ ಬುಧವಾರ ನೋಟಿಸ್ ನೀಡಲಾಗಿತ್ತು.
ಈ ಸಂಬಂಧ ಅವರನ್ನು ಗುರುವಾರ ಅವರ ಮನೆಯಲ್ಲಿ ವಶಕ್ಕೆ ಪಡೆದಿದ್ದರು. ತಿಮರೋಡಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರೀಶ್ ಮಟ್ಟಣ್ಣನವರ್ ಸೇರಿದಂತೆ ಹಲವರು ಅದಕ್ಕೆ ಅಡ್ಡಪಡಿಸಿದ್ದರು. ಇದರ ವಿರುದ್ಧವೂ ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದೂರು ನೀಡಿದ್ದರು. ಇದೀಗ ಇದೇ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.