ಹೊಳೆನರಸೀಪುರ ರೈತರಿಗೆ ಶ್ರೀರಾಮದೇವರ ಅಣೆಕಟ್ಟೆಯ ನಾಲೆಯ ಮೂಲಕ ನೀರು ಹರಿಸಿ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಟ್ಟಿರುವ ಸಚಿವ ರೇವಣ್ಣ , ಕೆ.ಆರ್.ಪೇಟೆ ತಾಲೂಕಿನ ರೈತರು ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ನದಿಗೆ ನೀರು ಹರಿಸಲು ಆದೇಶ ನೀಡದೆ ಕೃಷ್ಣರಾಜಪೇಟೆಯ ರೈತರಿಗೆ ಅನ್ಯಾಯ ಮಾಡಲು ಹೊರಟಿದ್ದಾರೆ.
ಇದರಿಂದ ಕೋಪಗೊಂಡ ಕೆ.ಆರ್.ಪೇಟೆ ರೈತರು ಕೆ.ಆರ್.ಪೇಟೆ ತಾಲೂಕಿನಲ್ಲಿ ಬೆಳೆದು ನಿಂತಿರುವ ಕಬ್ಬು ಮತ್ತು ಭತ್ತದ ಬೆಳೆಗಳನ್ನು ಉಳಿಸಿಕೊಳ್ಳಲು ಗೊರೂರು ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ಹೇಮಾವತಿ ನದಿಗೆ ಹರಿಸಿ ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಸೋಮವಾರದ ಒಳಗೆ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರು ಹರಿಸದಿದ್ದರೆ ಹೊಳೆನರಸೀಪುರದಲ್ಲಿನ ಸಚಿವ ರೇವಣ್ಣ ಅವರ ಮನೆಯ ಮುಂದೆ ವಿಷಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ಜೊತೆಗೆ ಗೊರೂರು ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.