ಉಡುಪಿ: ಕ್ರೂರಿಯೊಬ್ಬ ತನ್ನ ಬೈಕ್ಗೆ ನಾಯಿಯನ್ನು ಕಟ್ಟಿ ಆರು ಕಿಲೋಮೀಟರ್ವರೆಗೆ ಎಳೆದೊಯ್ದಿರುವ ಘಟನೆ ಉಡುಪಿಯ ಶಿರ್ವ ಗ್ರಾಮ ಪಂಚಾಯತ್ನ ಕಟ್ಟಡದ ಮುಂಬಾಗ ನಡೆದಿದೆ.
ನಾಯಿಯನ್ನು ಅಮಾನುಷವಾಗಿ ನಡೆಸಿಕೊಂಡ ವ್ಯಕ್ತಿಯನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ಪ್ರಾಣಿ ಪ್ರಿಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಅಬ್ದುಲ್ ಖಾದರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.
ಇನ್ನೂ ಈ ಸಂಬಂಧ ಪ್ರಾಣಿ ದಯಾ ಸಂಘದ ಸದಸ್ಯೆ ಮಂಜುಳಾ ಕರ್ಕೇರ ಅವರು ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅದರಂತೆ ಇದೀಗ ಆರೋಪಿ ವಿರುದ್ಧ ಸೆಕ್ಷನ್ 325 ಬಿಎನ್ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.