ಹನಿಟ್ರ್ಯಾಪ್ ಬಿರುಗಾಳಿ ಮಧ್ಯೆ ಸಿದ್ದರಾಮಯ್ಯ ಭೇಟಿಯಾದ ಖರ್ಗೆ: ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

Sampriya

ಭಾನುವಾರ, 23 ಮಾರ್ಚ್ 2025 (14:00 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ಬಿರುಗಾಳಿ ಎದ್ದಿರುವ ಬೆನ್ನಲ್ಲೆ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಕೆರಳಿಸಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಭಾರೀ ಸದ್ದು ಮಾಡುತ್ತಿದೆ.ಈ ಪ್ರಕರಣ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಹೈಕಮಾಂಡ್​ಗೆ ದೂರು ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಖುದ್ದಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಮೊಣಕಾಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ನೆಪದಲ್ಲಿ ರಾಜಣ್ಣ ಅವರ ಹನಿಟ್ರ್ಯಾಪ್​ ಆರೋಪದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ದೇಶದಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್‌ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಆದರೂ ಸಹ ಎಐಸಿಸಿ ಅಧ್ಯಕ್ಷರು ಸಿಎಂ ಹನಿಟ್ರ್ಯಾಪ್​ ಬಗ್ಗೆ ಸುದೀರ್ಘವಾಗಿ 45 ನಿಮಿಷಗಳ ಮಹತ್ವದ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ