ಲಾಲು ಯಾದವ್‌ಗೆ ಶಿಕ್ಷೆ: ಕೋರ್ಟ್ ತೀರ್ಪು ಪ್ರಶ್ನಿಸುವಂತಿಲ್ಲ ಎಂದ ಖರ್ಗೆ

ಭಾನುವಾರ, 24 ಡಿಸೆಂಬರ್ 2017 (16:44 IST)
ಮೇವು ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್‌ಗೆ ಶಿಕ್ಷೆಯಾಗಿದೆ ನ್ಯಾಯಾಲಯದ ತೀರ್ಪನ್ನು ನಾವು ಪ್ರಶ್ನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಆದರೆ, ಇದೇ ಮಾದರಿಯಲ್ಲಿ ಬಿಹಾರದಲ್ಲಿ ಎರಡು ಸಾವಿರ ಕೋಟಿ ರೂಪಾಯಿ ಹಗರಣವೂ ನಡೆದಿದೆ. ಜೆಡಿಯು ಮತ್ತು ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಎರಡು ಸಾವಿರ ಕೋಟಿಯನ್ನು ಖಜಾನೆಯಿಂದ ಅನಾಮತ್ತಾಗಿ ಎತ್ತಲಾಗಿದೆ ಇದರ ಕುರಿತು ಸಹ ಸಿಬಿಐ ಸಮಗ್ರ ತನಿಖೆ ನಡೆಸಬೇಕು.ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
 
ಬಿಹಾರ್ ರಾಜ್ಯದಲ್ಲಿ ಜೆಡಿಯು ಮತ್ತು ಬಿಜೆಪಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿವೆ. ಭ್ರಷ್ಟಾಚಾರಿಗಳ ವಿರುದ್ಧ ಕೇಂದ್ರ ಸರಕಾರ ಯಾಕೆ ಮೌನವಾಗಿದೆ ಎಂದು ಪ್ರಶ್ನಿಸಿದರು.
 
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ