ಮೊನ್ನೆ ಕುಮಾರಸ್ವಾಮಿ, ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಕಿಚ್ಚ ಸುದೀಪ್!
ಕುಮಾರಸ್ವಾಮಿ, ನಟ ಸುದೀಪ್ ಗೆ ಜೆಡಿಎಸ್ ಪರ ಪ್ರಚಾರ ನಡೆಸುವಂತೆ ಕೋರಿದ್ದರು ಎಂಬುದನ್ನು ಅವರೇ ಹೇಳಿದ್ದರು. ಆದರೆ ಈ ಬಗ್ಗೆ ಸುದೀಪ್ ಯಾವುದೇ ಸ್ಪಷ್ಟನೆ ಕೊಟ್ಟಿರಲಿಲ್ಲ. ಇದೀಗ ಇಂದು ಬೆಳಿಗ್ಗೆಯೇ ಸಿಎಂ ಸಿದ್ದರಾಮಯ್ಯರನ್ನು ಸುದೀಪ್ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದ ಸುದೀಪ್ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸುದೀಪ್ ಬಳಿ ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಸುದೀಪ್ ಯಾವ ಪಕ್ಷದ ಪ್ರಚಾರ ನಡೆಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳದ್ದಾಗಿದೆ.